ಪ್ರಗತಿವಾಹಿನಿ ಸುದ್ದಿ, ನವದೆಹಲಿ
ನವದೆಹಲಿ : ಈರುಳ್ಳಿ ಶೇಖರಣೆ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಚಿಲ್ಲರೆ ವ್ಯಾಪಾರಿಗಳು ಇನ್ನು ಮುಂದೆ ಎರಡು ಟನ್ ಈರುಳ್ಳಿಯನ್ನು ಮಾತ್ರ ಸಂಗ್ರಹಿಸಬೇಕು. ಈ ಮಟ್ಟಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
ಯಾರಾದರೂ ಎರಡು ಟನ್‌ಗಿಂತ ಹೆಚ್ಚು ಸಂಗ್ರಹಿಸಿದರೆ.. ಅಂತಹ ಗೋಡೌನ್ ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಕಳೆದ ವಾರವಷ್ಟೇ, ಈರುಳ್ಳಿ ಸಂಗ್ರಹವನ್ನು 10 ರಿಂದ 5 ಟನ್ಗಳಷ್ಟು ಕಡಿಮೆ ಮಾಡಲಾಗಿತ್ತು. ಕೇಂದ್ರ ಸರ್ಕಾರದ ಅಂಕಿಅಂಶಗಳ ಪ್ರಕಾರ, ಸೋಮವಾರ ಈರುಳ್ಳಿಯ ಗರಿಷ್ಠ ಚಿಲ್ಲರೆ ಬೆಲೆ ಪ್ರತಿ ಕೆ.ಜಿ.ಗೆ 165 ರೂ. ದೇಶದ ವಿವಿಧ ನಗರಗಳಲ್ಲಿನ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ 100 ರೂ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ