Belagavi NewsBelgaum NewsKannada NewsKarnataka NewsNationalPolitics
*ಗಣೇಶನ ಪ್ರತಿಷ್ಠಾಪಿಸಿ ಭಾವೈಕ್ಯತೆಯ ಸಂದೇಶ ಸಾರಿದ ಡಿಸಿ ಮೊಹಮ್ಮದ್ ರೊಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸಿ ಮೊಹಮ್ಮದ್ ರೊಷನ್ ಅವರು ಹಿಂದೂಗಳ ದೊಡ್ಡ ಹಾಗೂ ಪವಿತ್ರ ಧಾರ್ಮಿಕ ಹಬ್ಬವಾದ ಗಣೇಶ ಹಬ್ಬದಂದು ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಮ್ಮ ಮನೆಯಲ್ಲಿ ಗಣೇಶ ಮೂರ್ತಿಯನ್ನು ಈ ವರ್ಷವೂ ಪ್ರತಿಷ್ಠಾಪಿಸಿದರು. ಇದಕ್ಕೂ ಮುನ್ನ ಬೆಳಗಾವಿ ಚೆನ್ನಮ್ಮ ವೃತ್ತದ ಗಣೇಶ ಮಂದಿರದಲ್ಲಿ ಡಿಸಿ ವಿಶೇಷ ಪೂಜೆ ಸಲ್ಲಿಸಿದರು.
ಬುಧವಾರ ನಗರದೆಲ್ಲೆಡೆ ಭಕ್ತಾದಿಗಳು ಗಣೇಶನನ್ನು ಪ್ರತಿಷ್ಠಾಪನೆ ಮಾಡುವ ಸಡಗರದಲ್ಲಿದ್ದು, ಜಿಲ್ಲಾಧಿಕಾರಿಗಳು ತಮ್ಮ ಪರಿವಾರದೊಂದಿಗೆ ಚೆನ್ನಮ್ಮ ವೃತ್ತದಲ್ಲಿ ಇರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಪರಿಸರಪ್ರೇಮಿ ಗಣೇಶನನ್ನು ಪ್ರತಿಷ್ಠಾಪಿಸಿದರು
ಈ ವೇಳೆ ಜಿಲ್ಲಾಧಿಕಾರಿಗಳ ಕುಟುಂಬದವರೊಂದಿಗೆ, ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.