ಪ್ರಗತಿವಾಹಿನಿ ಸುದ್ದಿ, ನವದೆಹಲಿ
ನವದೆಹಲಿ : ಸಾಮಾಜಿಕ ಮಾಧ್ಯಮ ಖಾತೆಗಳನ್ನು ಆಧಾರ್, ಪ್ಯಾನ್ ಮತ್ತು ಮತದಾರರ ಗುರುತಿನ ಚೀಟಿಗಳೊಂದಿಗೆ ಲಿಂಕ್ ಮಾಡಲು ಆದೇಶ ಹೊರಡಿಸುವುದಾಗಿ ದೆಹಲಿ ಹೈಕೋರ್ಟ್ ಹೇಳಿದೆ. ಈ ನಡುವೆ ಸಿಜೆ ಡಿಎನ್ ಪಟೇಲ್ ನೇತೃತ್ವದ ನ್ಯಾಯಪೀಠ, ಹೆಚ್ಚಿನ ಸಂಖ್ಯೆಯ ಸೋಷಿಯಲ್ ಮೀಡಿಯಾ ಗ್ರಾಹಕರ ಡೇಟಾವನ್ನು ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದರು.
ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್ ಖಾತೆಗಳನ್ನು ಆಧಾರ್ ಮತ್ತು ಪ್ಯಾನ್‌ನೊಂದಿಗೆ ಲಿಂಕ್ ಮಾಡಲು ಕೇಂದ್ರವು ಅಸ್ತಿತ್ವದಲ್ಲಿರುವ ಕಾನೂನನ್ನು ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ. ಸೋಷಿಯಲ್ ಮೀಡಿಯಾ ಖಾತೆಗಳಲ್ಲಿನ 20 ನಕಲಿ ಖಾತೆಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿ ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಉಪಾಧ್ಯಾ ಪಿಲ್ ಅರ್ಜಿ ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ