
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಿರಂತರ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.