
ಪ್ರಗತಿವಾಹಿನಿ ಸುದ್ದಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರು ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನ್ಯೂ ಅಶೋಕ್ ನಗರದಲ್ಲಿ ನಡೆದ ಎನ್ ಕೌಂಟರ್ ಬಳಿಕ ದೆಹಲಿ ಪೊಲೀಸರು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ.
ಕಾರ್ತಿಕ್ ಜಾಕರ್ ಹಾಗೂ ಕವಿಶ್ ಬಂಧಿತ ಆರೋಪಿಗಳು. ಬಂಧನದ ವೇಳೆ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಇಬ್ಬರೂ ಅಮೆರಿಕ ಮೂಲದ ದರೋಡೆಕೋರ ಹ್ಯಾರಿ ಬಾಕ್ಸರ್ನ್ ಸಹಾಯಕರಾಗಿದ್ದು, ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.