Film & EntertainmentKarnataka NewsLatest

*ವೈವಾಹಿಕ ಜೀವನಕ್ಕೆ ಕಾಲಿಟ್ಟ ಆಂಕರ್ ಅನುಶ್ರೀ*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆಯೇರಿದ್ದಾರೆ.

ಕೊಡಗು ಮೂಲದ ಉದ್ಯಮಿ ರೋಷನ್ ಜೊತೆ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಇಂದು ಬೆಳಿಗ್ಗೆ 10:56ರ ಶುಭ ಮುಹೂರ್ತದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಮದುವೆ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು, ಕಲಾವಿದರು, ಆಪ್ತರು ಭಾಗವಹಿಸಿದ್ದರು. ಅನುಶ್ರೀ ಮದುವೆ ಹಿನ್ನೆಲೆಯಲ್ಲಿ ರೆಸಾರ್ಟ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಆದರೆ ಅಭಿಮಾನಿಗಳಿಗೆ ರೆಸಾರ್ಟ್ ಒಳಗೆ ಪ್ರವೇಶ ನೀಡಿಲ್ಲ. ಇದರಿಂದಾಗಿ ನಿರಾಶರಾಗಿ ವಾಪಸ್ ಆದ ಘಟನೆ ನಡೆದಿದೆ.

Home add -Advt

Related Articles

Back to top button