
ಪ್ರಗತಿವಾಹಿನಿ ಸುದ್ದಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯಲ್ಲಿ ಶೌಚಾಲಯದಲ್ಲಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದು, ಶಾಲೆಯ ಶೌಚಾಲಯದಲ್ಲಿಯೇ ಹೆರಿಗೆಯಾಗಿದ್ದಾಳೆ. ವಿದ್ಯಾರ್ಥಿನಿ ಗರ್ಭಧರಿಸಲು ಕಾರಣ ಯಾರು ಎಂಬುದು ಸ್ಪಷ್ಟವಾಗಿಲ್ಲ. ವಿದ್ಯಾರ್ಥಿನಿ ಈ ಬಗ್ಗೆ ಏನನ್ನೂ ಹೇಳುತ್ತಿಲ್ಲ ಎಂದು ಶಾಲೆಯ ಮೇಲ್ವಿಚಾರಕಿ ತಿಳಿಸಿದ್ದಾರೆ. ಸದ್ಯ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.