
ಪ್ರಗತಿವಾಹಿನಿ ಸುದ್ದಿ: ಗೇಮಿಂಗ್ ಆಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಮತ್ತೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಮತ್ತೆ ೬ ದಿನಗಳ ಕಾಲ ವೀರೇಂದ್ರ ಪಪ್ಪಿ ಅವರನ್ನು ಇಡಿ ಕಸ್ಟಡಿಗೆ ವಹಿಸಿ ನ್ಯಾ. ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಇಡಿ ಅಧಿಕಾರಿಗಳಿಗೆ ಮಹತ್ವದ ಸೂಚನೆಯನ್ನೂ ನೀಡಿದ್ದಾರೆ.
ವೀರೇಂದ್ರ ಪಪ್ಪಿ ಅವರಿಗೆ ನಿದ್ದೆಗೆ ಸಮಯ ನೀಡಬೇಕು. ಮೂಲಸೌಕರ್ಯ ಒಡಗಿಸಬೇಕು. ಶುದ್ಧ ಕುಡಿಯುವ ನೀರು, ವಿಶ್ರಾಂತಿಗೆ ಅವಕಾಶ ನೀಡಬೇಕು. ನಿತ್ಯ 30 ನಿಮಿಷ ವಕೀಲರ ಭೇಟಿಗೆ ಅವಕಾಶ ಕೊಡಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.