Kannada NewsKarnataka NewsLatest

*ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಗುರುದ್ವಾರಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗಳೂರಿನ ಹಲಸೂರು ಕೆರೆ ಸಮೀಪವಿರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ರಾಜ ಗಿರಿ ಎಂಬಾತನ ಇ-ಮೇಲ್ ಮೂಲಕವಾಗಿ ಬೆದರಿಕೆ ಸಂದೇಶ ಬಂದಿದೆ.

Home add -Advt

ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಡಲಾಗಿದೆ. ನಾಲ್ಕು RDX ಐಇಡಿಯಿಂದ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ. ಋಷಿಪಾಲ್ ಸಿಂಗ್ ಅವರ ದೂರಿನ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button