Film & EntertainmentKannada NewsKarnataka NewsLatest
*ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಅಸಭ್ಯ ಕಮೆಂಟ್: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ವಿಜಯಲಕ್ಷ್ಮೀ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
ನಟಿ, ಸಂಸದೆ ರಮ್ಯಾ ಬಗ್ಗೆ ಕಿಡಿಗೇಡಿಗಳು ಅಸಭ್ಯ ಕಮೆಂಟ್ ಮಾಡಿದ್ದ ಬೆನ್ನಲ್ಲೇ ಇದೀಗ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್ ಮಾಡಲಾಗಿದ್ದು, ಮಹಿಳಾ ಆಯೋಗಕ್ಕೂ ದೂರು ನೀಡಲಾಗಿದೆ. ಇದರ ಬೆನ್ನಲ್ಲೇ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.