
ವಸತಿ ಶಾಲೆಯ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಲಕನಿಂದ ಅತ್ಯಾಚಾರ: ಗರ್ಭಿಣಿಯಾದ ಸಂತ್ರಸ್ತೆ
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹೆರಿಗೆಯಾದ ಘಟನೆ ಎರಡು ದಿನಗಳ ಹಿಂದಷ್ಟೇ ಬೆಳಕಿಗೆ ಬಂದಿತ್ತು. ಇದೀಗ ಇಂಥದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ವಸತಿ ಶಾಲೆಯ ಅಪ್ರಾಪ್ತ ಬಾಲಕಿ ಮೇಲೆ ವಸತಿ ಶಾಲೆಯ ಅಪ್ರಾಪ್ತ ಬಾಲಕನೇ ಅತ್ಯಾಚಾರವೆಸಗಿರುವ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿ ತಂದೆ ಇಳಕಲ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇಳಕಲ್ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಬಾಲಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಳ್ಳಲಾಗಿದೆ.