Kannada NewsKarnataka NewsLatestPolitics
*ಧರ್ಮಸ್ಥಳ ಚಲೋ ಬೆನ್ನಲ್ಲೇ ಚಾಮುಂಡಿ ಚಲೋ ನಡೆಸಬೇಕಾಗುತ್ತೆ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ವಿಪಕ್ಷ ನಾಯಕ ಆರ್.ಅಶೋಕ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚ್ನಾಡ ದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಚಾಮುಂಡಿ ದೇಗುಲ ಹಿಂದೂಗಳದ್ದಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಮಗೆ ಧೈರ್ಯವಿದ್ದರೆ ಮಸೀದಿ ಮುಸ್ಲಿಂರದ್ದಲ್ಲ ಎಂದು ಹೇಳಿ ಎಂದು ವಾಗ್ದಾಳಿ ನಡೆಸಿದರು.
ಚಾಮುಂಡಿ ತಾಯಿಯಿಂದಲೇ ಕಾಂಗ್ರೆಸ್ ಅವನತಿ ಆರಂಭವಾಗಲಿದೆ. ಚಾಮುಂಡಿ ಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದರೆ ಸುಮ್ಮನಿರಲ್ಲ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸಿ ಷಡ್ಯಂತ್ರ ನಡೆಸಿದ್ದರ ವಿರುದ್ಧ ಧರ್ಮಸ್ಥಳ ಚಲೋ ಹೋರಾಟ ನಡೆಸಿದ್ದೇವೆ. ಹಾಗೇ ಚಾಮುಂಡಿ ಚಲೋ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.