
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಸುತ್ತಮುತ್ತು ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.
ನಾಳೆ ಹಾಗೂ ಸೆಪ್ಟೆಂಬರ್ 3ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕ ಮಳೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.