
ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.
ವೀರೇಂದ್ರ ಪಪ್ಪಿ ಅವರ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಇಡಿ ಅಧಿಕಾರಿಗಳು ಆನ್ ಲೈನ್ ಬೆಟ್ಟಿಂಗ್ ಆಪ್ ಮೂಲಕ ಸಾವಿರಾರು ಕೋಟಿ ವ್ಯವಹಾರ ನಡೆದಿದೆ. ಈ ಬಗ್ಗೆ ಡಿಜಿಟಲ್ ದಾಖಲಾತಿ ಸಂಗ್ರಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಮಯಹಿಡಿಯುತ್ತದೆ. ಅಲ್ಲದೇ ವಿಚಾರಣೆಗೆ ಆರೋಪಿ ಸಹಕರಿಸುತ್ತಿಲ್ಲ. ಹೆಚ್ಚಿನ ವಿಚಾರಣೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಕೋರಿದ್ದಾರೆ.
ವಾದ ಆಲಿಸಿದ ನ್ಯಾಯಾಲಯ ಸೆಪ್ಟೆಂಬರ್ 8ರವರೆಗೆ ವೀರೇಂದ್ರ ಪಪ್ಪಿ ಅವರನ್ನು ಇಡಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.