Kannada NewsKarnataka NewsLatest

*ಮುಂದಿನ ಮೂರ್ನಾಲ್ಕು ದಿನ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯ ತೀವ್ರತೆ ಹೆಚ್ಚಾಗಿದ್ದು, ಮುಂದಿನ ಮೂರ್ನಾಲ್ಕು ದಿನ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಇನ್ನು ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದ‌ರ್, ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು ಇದರ ಪರಿಣಾಮ ರಾಜ್ಯದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಹೀಗಾಗಿ ಸೆ. 6ರವರೆಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಸೆಪ್ಟೆಂಬ‌ರ್ ತಿಂಗಳಲ್ಲೂ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆಯುವ ಸೂಚನೆ ಸಿಕ್ಕಂತಾಗಿದೆ.

ಪ್ರಮುಖವಾಗಿ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. 

Related Articles

Back to top button