Karnataka NewsLatestPolitics

*BREAKING: ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಭೋವಿ ನಿಗಮದಲ್ಲಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ.

ಭೋವಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮವೆಸಗಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರವಿ ಕುಮಾರ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರವಿಕುಮಾರ್ ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button