Kannada NewsKarnataka NewsLatest
*ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ನ್ಯಾಯಾಂಗ ಬಂಧನ; ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಜೈಲುಪಾಲು*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಆರೋಪಿ ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.
ಧರ್ಮಸ್ಥಳ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿದ್ದ ಎಸ್ ಐಟಿ ಅಧಿಕಾರಿಗಳು 15 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಎಸ್ ಐಟಿ ಕಸ್ಟಡಿ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಆತನನ್ನು ದಕ್ಷಿಣ ಕನ್ನಡ ಜಿಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲು ಪಾಲಾಗಿದ್ದಾನೆ. ಭದ್ರತಾ ದೃಷ್ಟಿಯಿಂದ ಆತನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.