Kannada NewsKarnataka NewsLatest

*ರಾಜ್ಯದ ಯಾವ ಜಿಲ್ಲೆಯಲ್ಲಿ ಮಳೆ? ಯಾವ ಜಿಲ್ಲೆಯಲ್ಲಿ ಒಣಹವೆ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆ ವರುಣಾರ್ಭಟ ತಗ್ಗಿದೆ. ಆದರೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13ರವರೆಗೂ ಮಳೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.


Related Articles

Back to top button