
ಪ್ರಗತಿವಾಹಿನಿ ಸುದ್ದಿ: ಫ್ರಾನ್ಸ್ ಪ್ರಧಾನಿ ಫ್ರಾಂಕೋಯಿಸ್ ಬೇರೂ ಅವರು ವಿಶ್ವಾಸ ಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಪತನಗೊಂಡಿದೆ.
ಸರ್ಕಾರವನ್ನು ಪದಚ್ಯುತಗೊಳಿಸಲಾಗಿದೆ. ಸರ್ಕಾರದ ವಿರುದ್ಧ ಸಂಸದರು ಅವಿಶ್ವಾಸ ಮತ ಚಲಾಯಿಸಿದ ಹಿನ್ನೆಲೆ ಫ್ರಾಂಕೋಯಿಸ್ ಪ್ರಧಾನಿ ಸ್ಥಾನ ಕಳೆದುಕೊಂಡಿದ್ದಾರೆ.
ಇನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕೂಡ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರಧಾನಿಯಾಗಿ ನೇಮಕಗೊಂಡ ಕೇವಲ ಎಂಟು ತಿಂಗಳ ನಂತರ, ಅವರ ವಿರುದ್ಧ 364-194 ಮತಗಳಿಂದ ಬೇರೂ ಅವರನ್ನು ಪದಚ್ಯುತಗೊಳಿಸಲಾಗಿದೆ.
ಮಂಗಳವಾರ ಬೆಳಿಗ್ಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುವ ನಿರೀಕ್ಷೆಯಿದೆ.