
ಪ್ರಗತಿವಾಹಿನಿ ಸುದ್ದಿ: ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಮತನಾಡ ಪ್ರಕ್ರಿಯೆ ಆರಂಭವಾಗಿದೆ.
ಬೆಳಿಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನಕ್ಕೆ ಬಂದು ಮತದಾನ ಮಾಡಿದ್ದಾರೆ. ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಸೇರಿದಂತೆ ಹಲವು ಘಟಾನುಘಟಿ ನಾಯಕರು ಮತದಾನ ಮಾಡಿದ್ದಾರೆ.
ಎನ್ ಡಿಎ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಹಾಗೂ ವಿಪಕ್ಷ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ನ್ಯಾ. ಸುದರ್ಶನ್ ರೆಡ್ಡಿ ಕಣದಲ್ಲಿದ್ದಾರೆ. ಜುಲೈ 21ರಂದು ಜಗದೀಪ್ ದನಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದರು.