Kannada NewsKarnataka NewsNationalPolitics

*ಉಪ ರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್‌ ಆಯ್ಕೆ:ಅಭಿನಂದಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ* 

ಪ್ರಗತಿವಾಹಿನಿ ಸುದ್ದಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಇಂದು ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲದೊಂದಿಗೆ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಷ್ಟ್ರಕ್ಕೆ ದಶಕಗಳ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿದ ಅನುಭವಿ ನಾಯಕರೂ ಆಗಿರುವ ಶ್ರೀಮಂತ ಸಂಸದೀಯ ಅನುಭವ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ ಕುರಿತ ದೃಢವಾದ ಬದ್ಧತೆಯು ರಾಜ್ಯಸಭೆಯ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಉತ್ತಮಪಡಿಸುತ್ತದೆ, ನಮ್ಮ ಹೆಮ್ಮೆಯ  ಪ್ರಜಾಪ್ರಭುತ್ವದ ಚರ್ಚೆಯನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ರಾಷ್ಟ್ರವು ಪರಿವರ್ತನಾತ್ಮಕ ಪ್ರಗತಿಗೆ ಸಾಕ್ಷಿಯಾಗುತ್ತಲೇ ಇದೆ ಮತ್ತು ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಅವರ ಪಾತ್ರವು ನಮ್ಮ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವದ ಚೈತನ್ಯವನ್ನು ಮತ್ತಷ್ಟು ಎತ್ತಿಹಿಡಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Home add -Advt

Related Articles

Back to top button