
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಒಟ್ಟು 69 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೀದರ್ ಪಶುವೈದ್ಯಕೀಯ ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಪ್ರಕರಣ ಸಂಬಂಧ 69 ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ವಿವಿ ಅಧಿಕಾರಿಗಳು, ಸಿಬ್ಬಂದಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಬೀದರ್ ನಲ್ಲಿ 24 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಬೆಂಗಳೂರಿನಲ್ಲಿ 31 ಕಡೆ, ಕೊಪ್ಪಳದಲ್ಲಿ 2 ಕಡೆ, ಚಿಕ್ಕಮಗಳೂರಿನಲ್ಲಿ 2 ಕಡೆ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ಒಟ್ಟು 69 ಕಡೆ ದಾಳಿ ನಡೆಸಲಾಗಿದೆ.