
ಪ್ರಗತಿವಾಹಿನಿ ಸುದ್ದಿ: ಒಳ ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಎಸ್ ಸಿ ಒಳ ಮೀಸಲಾತಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚಿ, ಕೊರಮ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೀಸಲಾತಿಗಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಮೈಮೇಲೆ ಡಿಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದ ಮಹಿಳೆಯನ್ನು ತಕ್ಷಣ ಸ್ಥಳದಲ್ಲಿದ್ದವರು ತಡೆದಿದ್ದಾರೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಂದೆಡೆ ವ್ಯಕ್ತಿಯೋರ್ವ ತಲೆ ಬೋಳಿಸಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.