Kannada NewsKarnataka NewsNationalPolitics

*ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.

ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್‌ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಹಿಂದೂ ಆಗಮಿಕ ಪದ್ಧತಿ ಪ್ರಕಾರವೇ ಕಟ್ಟುನಿಟ್ಟಾಗಿ ದಸರಾ ಉದ್ಘಾಟನೆ ನೆರವೇರಿಸಲು ನಿರ್ದೇಶನ ನೀಡಬೇಕು ಎಂದು ಬೆಂಗಳೂರಿನ ನಿವಾಸಿ ಎಚ್‌.ಎಸ್‌.ಗೌರವ್‌ ಕೋರಿದ್ದಾರೆ.

ಬೆಂಗಳೂರಿನ ಉದ್ಯಮಿ ಟಿ.ಗಿರೀಶ್‌ ಕುಮಾರ್‌ ಹಾಗೂ ಅಭಿನವ ಭಾರತ್‌ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್‌.ಸೌಮ್ಯ ಕೂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿಗಳು ವಿಚಾರಣೆಗೆ ಬರಬೇಕಿದೆ.

ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಈಗಾಗಲೇ ಹೈಕೋರ್ಟ್‌ ಮೆಟ್ಟಿಲೇರಿರುವುದು ಎಲ್ಲರಿಗೂ ತಿಳಿದಿದೆ. 

Home add -Advt

Related Articles

Back to top button