
ಪ್ರಗತಿವಾಹಿನಿ ಸುದ್ದಿ: ಕಲಬುರಗಿಯ ಚಿಂಚನಸೂರು ಗ್ರಾಮದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ.
ಇಂದು ಬೆಳಿಗ್ಗೆ 8 ಗಂಟೆ 17 ನಿಮಿಷಕ್ಕೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.