Film & EntertainmentKannada NewsKarnataka NewsLatest
*ನಟ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಮೇರು ನಟ, ಸಾಹಸ ಸಿಂಹ ದಿ.ವಿಷ್ಣುವರ್ಧನ್ ಅವರಿಗೆ ಹಾಗೂ ಹಿರಿಯ ನಟಿ ದಿ. ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ನಟ ವಿಷ್ಣುವರ್ಧನ್ ಅವರಿಗೆ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಘೋಷಿಸಿದರು.
ಇದೇ ವೇಳೆ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.