Karnataka NewsLatestPolitics

*ಶಾಸಕ ಯತ್ನಾಳ್ ವಿರುದ್ಧವೂ ದಾಖಲಾಯ್ತು FIR*

ಪ್ರಗತಿವಾಹಿನಿ ಸುದ್ದಿ: ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿಯಾಯಿತು, ಇದೀಗ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ವಿರುದ್ಧವೂ ಎಫ್ ಐ ಆರ್ ದಾಖಲಾಗಿದೆ.

ನಿನ್ನೆ ಶಾಸಕ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿ ಭಾಷಣ ಮಾಡಿದ್ದರು. ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಶಾಸಕ ಯತ್ನಾಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮದ್ದೂರು ಪಿಎಸ್ ಐ ಮಂಜುನಾಥ್ ನೀಡಿದ ದೂರಿನ ಮೇರೆಗೆ ಮದ್ದೂರು ಠಾಣೆಯಲ್ಲಿ ಯತ್ನಾಳ್ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ಯಕೋಮಿಗೆ ಧಕ್ಕೆ, ಕೋಮುಗಳ ನಡುವೆ ವೈರತ್ವ ಭಾಷಣ ಮಾಡಿದ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ.

Home add -Advt


Related Articles

Back to top button