
ಪ್ರಗತಿವಾಹಿನಿ ಸುದ್ದಿ: ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.