
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯ ಆಂಧ್ರ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಮೈಸೂರು, ರಾಮನಗರ, ತುಮಕೂರಿನಲ್ಲಿ ಸೆ.11 ಹಾಗೂ 12 ರಂದು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಸೆ.13 ಹಾಗೂ 14 ರಂದು ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಲ್ಲಿ ಸೆಪ್ಟೆಂಬರ್ 13ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 4 ದಿನ ವರುಣ ಅಬ್ಬರಿಸಲಿದ್ದಾನೆ.ಮೋಡ ಕವಿದ ವಾತಾವರಣ ಇರಲಿದೆ. ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.