
ಪ್ರಗತಿವಾಹಿನಿ ಸುದ್ದಿ: ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿ ಹಲಹವ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸೆಪ್ಟೆಂಬರ್ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪಿ.ರಾಜೀವ್ ನೇತೃತ್ವದಲ್ಲಿ ಒಳಮೀಸಲಾತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ಉಗ್ರಸ್ವರೂಪ ಪಡೆದುಕೊಂಡಿತ್ತು. ಇದೇ ವಿಚಾರವಾಗಿ ಬಿಜೆಪಿ ಮುಖಂಡರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.