Film & EntertainmentKarnataka NewsLatestPolitics
*ನಟ ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಕರ್ನಾಟಕ ರತ್ನ: ಸರ್ಕಾರಕ್ಕೆ ಧನ್ಯವಾದ ತಿಳಿಸಿದ ನಟಿಯರು*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಖ್ಯಾತ ನಟರಾದ ದಿವಂಗತ ಡಾ. ವಿಷ್ಣುವರ್ಧನ್ ಹಾಗೂ ಡಾ. ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ಸರಕಾರವು ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನಟಿಯರಾದ ಮಾಜಿ ಸಚಿವೆ ಜಯಮಾಲಾ, ಶ್ರುತಿ ಹಾಗೂ ಮಾಳವಿಕಾ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ನಟಿಯರು ಧನ್ಯವಾದ ಸಲ್ಲಿಸಿದರು.