*ವಿಷಾಹಾರ ಸೇವಿಸಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯಪಾಲಕ ಶಿವಪ್ಪ ಡುಕುರೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಲತಾ ಅಮಾನತುಗೊಂಡವರು.
ಶುಕ್ರವಾರ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರವಾಗಿ ಉಪ್ಪಿಟ್ಟು ಹಾಗೂ ಟೀ ವಿತರಣೆ ಮಾಡಲಾಗಿತ್ತು. ಇದನ್ನು ಸೇವಿಸಿದ್ದ 77 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ರಾಜಮಾ ದಾದನ್ನವರ್ ನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.