Belagavi NewsBelgaum NewsKannada NewsKarnataka News

*ವಾಯುಭಾರ ಕುಸಿತ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯ ಆಂಧ್ರ ಕರಾವಳಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ರಾಜ್ಯದ ಇತರ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಕರ್ನಾಟಕ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಇಲ್ಲಿ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

Related Articles

Back to top button