Kannada NewsKarnataka News

*ಮತ್ತೆ ವಿದ್ಯುತ್ ಶಾಕ್: ದರ ಏರಿಕೆಗೆ ಪ್ರಸ್ತಾವನೆ*

ಪ್ರಗತಿವಾಹಿನಿ ಸುದ್ದಿ: ಮತ್ತೊಮ್ಮೆ ವಿದ್ಯುತ್ ದರ ಏರಿಕೆಗೆ ‘ಬೆಸ್ಕಾಂ’ ಪ್ರಸ್ತಾವನೆ ಸಲ್ಲಿಸಿದೆ. ಬೆಸ್ಕಾಂ ಪ್ರಸ್ತಾವನೆ ಬಗ್ಗೆ ಎಫ್ ಕೆ ಸಿಸಿಐ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರ ಜನರಿಗೆ ಮತ್ತೊಂದು ಶಾಕ್ ಕೊಡಲು ಮುಂದಾಗಿದೆ. ವಿದ್ಯುತ್ ದರವನ್ನು ಮತ್ತಷ್ಟು ಹೆಚ್ಚಿಸಿ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯೋಕೆ ಸಿದ್ಧತೆ ನಡೆದಿದೆ. 

ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಈ ಬಾರಿ ಬೆಲೆ ಪೈಸೆ ಲೆಕ್ಕದಲ್ಲಿ ಏರಿಕೆಯಾಗಲ್ಲ ರೂಪಾಯಿ ಲೆಕ್ಕದಲ್ಲಿ ಏರಿಕೆಯಾಗುವ ನಿರೀಕ್ಷೆ ಇದೆ.

ಪ್ರತಿ ಯೂನಿಟ್‌ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Home add -Advt

Related Articles

Back to top button