
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ನಡುರಸ್ತೆಯಲ್ಲಿ ಬಿಎಂಟಿಸಿ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಂದು ಬೆಳಗಿನಜಾವ 5:15ರ ಸುಮಾರಿಗೆ 75 ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಹೆಚ್ ಎ ಎಲ್ ಗೇಟ್ ಬಳಿ ತೆರಳುತ್ತಿದ್ದ ವೇಳೆ ಬಸ್ ನ ಎಂಜೀನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಬಸ್ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿ ಬಸ್ ತುಂಬಾ ವ್ಯಾಪಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.