
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಗಮದದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇದೇ ಮೊದಲ ಬಾರಿಗೆ ದಾಳಿ ಆರಂಭಿಸಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ನಾಯಕರ ಮನೆಗಳ ಮೇಲೆ ರೆಡ್ ಮಾಡಿದೆ.
ಬಳ್ಳಾರಿ ಉದ್ಯಮಿ ಕುಮಾರಸ್ವಾಮಿ ಹಾಗೂ ಅವರ ಪುತ್ರ, ಬಳ್ಳಾರಿ ಪಾಲಿಕೆ ಬಿಜೆಪಿ ಕಾರ್ಪೊರೇಟರ್ ಗೋವಿಂದರಾಜುಲು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಿಂದ ಸಿಬಿಐ ಅಧಿಕಾರಿಗಳು ಬಳ್ಳಾರಿಗೆ ತೆರಳಿದ್ದು, ಗೋವಿಂದರಾಜುಲು ಮನೆ ಮೇಲೆ ದಾಳಿ ನಡೆಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣದ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ನಿಂದ ಗೋವಿಂದರಾಜುಲುಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.