
ಪ್ರಗತಿವಾಹಿನಿ ಸುದ್ದಿ: ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಹೆಚ್ಚುವರಿಯಾಗಿ ಮಹಾರಾಷ್ಟ್ರದ ರಾಜ್ಯಪಾಲರ ಹೊಣೆಗಾರಿಕೆಯನ್ನು ನೀಡಿದ್ದು, ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಸೋಮವಾರ ಮುಂಬೈ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಅವರು ದೇವವ್ರತ್ ಅವರಿಗೆ ಪ್ರಮಾಣವಚನ ಬೋಧಿಸಿದರು. ದೇವವ್ರತ್ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜ್ಯದ ಹಲವು ಸಚಿವರು, ಉನ್ನತ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.