Kannada NewsKarnataka NewsLatestPolitics

*ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸಿ: ಸಿಎಂ ಕರೆ*

ಪ್ರಗತಿವಾಹಿನಿ ಸುದ್ದಿ: ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ‌ ಅಧ್ಯಯನ‌ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಆಹಾರದ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಿ. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಸಂಪೂರ್ಣವಾಗಿ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.

ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದರು.

Home add -Advt

ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ಕೃಷಿ ವಿವಿಗಳಿಗೆ ಕರೆ ನೀಡಿದರು.

ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಇವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಸಿಎಂ ಸೂಚಿಸಿದರು.

ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ ಎಂದರು.

ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ ಎಂದರು.

ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ 90 ರಷ್ಟು ಪ್ರಗತಿ ಪರಿಹಾರ ವರದಿ ನೀಡಿರುವುದಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.

Related Articles

Back to top button