
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರಿಳಿ ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಪ್ಪಿಗರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಕೆರೆಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆರೆಗೆ ಬಿದ್ದ ಕಾರನ್ನು ಮೇಲಕೆತ್ತಲಾಗಿದೆ.