
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕ ಗೌರಿಶಂಕರ್ ಅಗ್ರಹಾರಿ ಅವರ ಅಶ್ಲೀಲ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಗೌರಿಶಂಕರ್ ಅಗ್ರಹಾರಿ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿದ್ದರು. ಗೌರಿಶ್ಂಕರ್ ಅಗ್ರಹಾರಿ ಬಾಲಕಿಯೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿರುವ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ.
ವೈರಲ್ ಆಗಿರುವ ವಿಡಿಯೋ ತಿರುಚಿರುವ ವಿಡಿಯೋ ಆಗಿದ್ದು, ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಗೌರಿಶಂಕರ್ ತಿಳಿಸಿದ್ದಾರೆ. ಈ ನಡುವೆ ಬಿಜೆಪಿಯಿಂದ ಗೌರಿಶಂಕರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.