
ಪ್ರಗತಿವಾಹಿನಿ ಸುದ್ದಿ: ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ, ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರು ಘಟನೆ ವಿಜಯಪುರದ ಚಡಚಣ ಪ್ರದೇಶದ SBI ಬ್ಯಾಂಕ್ ನಲ್ಲಿ ನಡೆದಿದೆ.
ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಪಿಸ್ತೂಲು ಮತ್ತು ಮಾರಕಾಸ್ತ್ರಗಳೊಂದಿಗೆ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಘಟನೆ ನಡೆದ ತಕ್ಷಣ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬ್ಯಾಂಕ್‌ನಿಂದ ಸುಮಾರು 8 ಕೋಟಿ ನಗದು, ಸುಮಾರು 50 ಕೆ.ಜಿಗೂ ಹೆಚ್ಚು ಚಿನ್ನ ದರೋಡೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ದರೋಡೆಕೋರರ ಗ್ಯಾಂಗ್ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ, ಪೊಲೀಸರು ಮಹಾರಾಷ್ಟ್ರವನ್ನು ಸಂಪರ್ಕಿಸುವ ರಸ್ತೆಗಳಿಗೆ ನಾಕಾ ಬಂಧಿ ಹಾಕಿ ಅಪರಾಧಿಗಳನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.