
ಪ್ರಗತಿವಾಹಿನಿ ಸುದ್ದಿ; ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ರನ್ನು ವಿಚಾರಣೆಗೆ ಕರೆಯಲಾಗಿತ್ತು. ಹೆಚ್ಚಿನ ವಿಚಾರಣೆಗೆ ಒಳಪಡಿಸಲು ವಶಕ್ಕೆ ಪಡೆಯಲಾಗಿದೆ.
ಮೈಸೂರಿನ ಶಾಂತಿ ನಗರದ ಇಡಿ ಕಚೇರಿಯಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಗೆ ಹಾಜರಾಗಿದ್ದರು. ಹೇಳಿಕೆ ನೀಡುವ ವೇಳೆ ವ್ಯತ್ಯಾಸಗಳು ಕಂಡುಬಂದ ಹಿನ್ನೆಲೆ ಇದೀಗ ಇಡಿ ಅಧಿಕಾರಿಗಳು ದಿನೇಶ್ ಅವರನ್ನು ವಿಚಾರಣೆ ನಡೆಸಿ ತಮ್ಮ ವಶದಲ್ಲಿ ಇಟ್ಟುಕೊಂಡಿದ್ದಾರೆ.
ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.