Belagavi NewsBelgaum NewsKannada NewsKarnataka NewsPolitics

*ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬುಧವಾರ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ನಡೆಯಿತು.  

ಸಂಸದರಾದ ಜಗದೀಶ್ ಶೆಟ್ಟರ್ ಅವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಲ ಮಾತನಾಡಿದ ಅವರು, ಜಾಗತಿಕ ಯುಗದಲ್ಲಿ ಯುವ ಜನತೆ ರಕ್ತದಾನದ ಮಹತ್ವದ ಮನವರಿಕೆಯನ್ನು ಮಾಡಿಕೊಳ್ಳುವ ಕಡೆಗೆ ಸಾಗಬೇಕು. ರಕ್ತದಾನ ಮಾಡುವುದರಿಂದ ಸಾವು-ಬದುಕಿನ ನಡುವೆ ಹೊರಾಟಮಾಡುತ್ತಿರುವ ರಕ್ತದ ಅವಶ್ಯಕತೆ ಇರುವ ರೋಗಿಗಳ ಜೀವ ಉಳಿಸಿದಂತಾಗುತ್ತದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಮಾತನಾಡಿ, ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದ ದಾನವಾಗಿದ್ದು ಈ ಬಗ್ಗೆ ಯುವಶಕ್ತಿ ಹೆಚ್ಚಿನ ಗಮನಹರಿಸುವ ನಿಟ್ಟಿನಲ್ಲಿ ಜಾಗೃತರಾಗಿ ಹೆಜ್ಜೆ ಇಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷರಾದ ಮಹಾಂತೇಶ ಚಿನ್ನಪ್ಪಗೌಡರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಶ್ರೀ

Home add -Advt

ದೇಸಾಯಿ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಈರಣ್ಣ ಅಂಗಡಿ, ಕೋಶಾಧ್ಯಕ್ಷ ಸಂತೋಷ ದೇಶನೂರ, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ ಕೋಚೇರಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ, ಕಾರ್ಯದರ್ಶಿಗಳಾದ ವಿಜಯ ಗುಡದರಿ ,ಗುರು ಹಿರೇಮಠ ಮತ್ತು ಕಾರ್ಯಕರ್ತರು, ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು. 

Related Articles

Back to top button