Film & EntertainmentKarnataka NewsLatest
*ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಂಗಳೂರು ಕಮಿಷನರ್ ಗೆ ದೂರು*

ಪ್ರಗತಿವಾಹಿನಿ ಸುದ್ದಿ: ಅಭಿನಯ ಚಕ್ರವರ್ತಿ, ನಟ ಕಿಚ್ಚಾ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದ್ದು, ಈ ಬಗ್ಗೆ ಅಖಿಲ ಕರ್ನಾಟಕ ಕಿಚ್ಚ ಸುದೀಪ್ ಸೇನಾ ಸಮಿತಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ನಟ ಕಿಚ್ಚ ಸುದೀಪ್ ಬಗ್ಗೆ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಹಾಕಿ, ಕಮೆಂಟ್ ಹಾಕಿದ್ದಾರೆ. ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಇಂತಹ ಕೃತ್ಯವೆಸಗುತ್ತಿದ್ದು, ಇದರಿಂದ ನಟನ ಗೌರವಕ್ಕೆ ಧಕ್ಕೆಯಾಗುತ್ತಿದೆ. ಈ ರೀತಿ ಮಾಡಿ ಸ್ಟಾರ್ ವಾರ್ ಆರಂಭಿಸುವ ತಂತ್ರಗಾರಿಕೆ ನಡೆಸಲಾಗುತ್ತಿದೆ. ಇಂತಹ ಕಿಒಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಅಖಿಲ ಕರ್ನಾಟಕ ಕಿಚ್ಚ ಸುದೀಪ್ ಸೇನಾ ಸಮಿತಿ ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದು, ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.