
ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದಿನೇಶ್ ಹೊಸೂರು ರಾಜೇಗೌಡ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಾಸಕ ರಾಜೇಗೌಡ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಚಿಕ್ಕಮಗಳೂರು ಲೋಕಾಯುಕ್ತಕ್ಕೆ ಆದೇಶ ನೀಡಿದೆ.
ಶಾಸಕರ ಪತ್ನಿ ಹಾಗೂ ಮಗನ ವಿರುದ್ಧವೂ ತನಿಖೆ ನಡೆಸಬೇಕು. 60 ದಿನಗಳ ಒಳಗಾಗಿ ತನಿಖಾ ವರದಿ ಸಲ್ಲಿಸಬೇಕು ಎಂದು ಕೋರ್ಟ್ ಸೂಚಿಸಿದೆ.