
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪಿರುವ ಘಾನೆ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಪುಣೆಯ ಈದ್ಗಾ ಮೈದಾನದ ಬಳಿ ನಿಂತಿದ್ದ ಕಂಟೇನರ್ ಟ್ರಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ದಿವ್ಯಾ ರಾಜ್ ಸಿಂಗ್ ರಾಥೋಡ್ (20) ಹಾಗೂ ಸಿದ್ದಾಂತ್ ಆನಂದ್ ಶೇಖರ್ (20) ಮೃತ ವಿದ್ಯಾರ್ಥಿಗಳು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಲೋನಾವಾಲಾಗೆ ತೆರಳಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.