*ಉಪನ್ಯಾಸಕರಿಂದಲೇ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಕುಡಿದು ಬಂದು ವಿಶ್ವವಿದ್ಯಾಲಯದ ಆವರಣದಲ್ಲಿ ಡ್ಯಾನ್ಸ್*

ಪ್ರಗತಿವಾಹಿನಿ ಸುದ್ದಿ: ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಿ ಪಾಠ ಮಾಡಬೇಕಾದ ಉಪನ್ಯಾಸಕರೇ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ನಡೆದಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಐವರು ಅತಿಥಿ ಉಪನ್ಯಾಸಕರು ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಕುಡಿದು ಬಂದು ಡ್ಯಾನ್ಸ್ ಮಾಡುವುದು, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವುದು ಮಾಡುತ್ತಿರುವುದಾಗಿ ಆರೋಪ ಕೇಳಿಬಂದಿದೆ.
ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಬೆಂಗಳೂರಿನ ಜ್ಞನಭಾರತಿ ಪೊಲೀಸ್ ಠಾಣೆಯಲ್ಲಿ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಅತಿಥಿ ಉಪನ್ಯಾಸಕ ರಾಮಾಂಜನೇಯ ಸೇರಿದಂತೆ ಉಳಿದ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಕುಡಿದು ಬಂದು ವಿವಿ ಆವರಣದಲ್ಲಿ ಹಾಡು ಹಾಡುತ್ತಾ ಡ್ಯಾನ್ಸ್ ಮಾಡುವುದು, ಶರ್ಟ್ ಬಿಚ್ಚಿ ಕುಣಿಯುವುದು, ಕಾರಿನಲ್ಲಿ ಮೋಜು-ಮಸ್ತಿ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಅಲ್ಲದೇ ರಾಮಾಂಜನೇಯ, ಅಂಧ ವಿದ್ಯಾರ್ಥಿನಿಗೆ ಇಂಟರ್ನಲ್ ಮಾರ್ಕ್ಸ್ ಕೊಡಹು ಹಣಕ್ಕೆ ಬೇಡಿಕೆ ಇಟ್ಟಿರುವ ಆಡೀಯೋ ಕೂಡ ಬಹಿರಂಗವಾಗಿದೆ. ಅಂಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.