
ಪ್ರಗತಿವಾಹಿನಿ ಸುದ್ದಿ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಕೋಡಗಿನ ವಿರಾಜಪೇಟೆಯಲ್ಲಿ ನಡೆದಿದೆ.
ಕೇರಳ ಮೂಲದ ಶಿಜು ಮತ್ತು ಪ್ರದೀಪ್ ಎಂಬಾತರನ್ನು ಬಂಧಿಸಿರುವ ಪೊಲೀಸರು ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನ ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತಿದ್ದಾರೆ.