
ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳನ್ನು ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲದ ರಾಯಲ್ ಎಂಬಸಿ ಅಪಾರ್ಟ್ ಮೆಂಟ್ ನ 17ನೇ ಮಹಡಿಯ ಫ್ಲಾಟ್ ಮೇಲೆ ದಾಲಿ ನಡೆಸುದ ವೇಳೆ 2 ಕೆಜಿ 105 ಗ್ರಾಂ ಗಾಂಜಾ, ಹುಕ್ಕಾ, ಡಿಜಿಟಲ್ ಸ್ಕೇಲ್ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ವೇಳೆ ಆರ್ಯನ್ ಸಿ ತಾದಾನಿ ಎಂಬಾತನನ್ನು ಬಂಧಿಸಲಾಗಿದೆ.
ಇದೇ ವೇಳೆ ಇನ್ನೋರ್ವ ಆರೋಪಿ ಆರ್ಯನ್ ಚಗಪ್ಪನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬಂಧಿತರಿಬ್ಬರೂ ಮಣಿಪಾಲದ ಪ್ರತಿಷ್ಠಿತ ಕಾಲೇಜಿನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರೂ ಮಾಧಕ ವ್ಯಸನಿಗಳಾಗಿದ್ದು, ಅಪಾರ್ಟ್ ಮೆಂಟ್ ಗಳಲ್ಲಿ ಹಾಗೂ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಗಾಂಜಾ ಮಾರಾಟ ಮಡುತ್ತಿದ್ದರು.