Film & EntertainmentKannada NewsLatest

*ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಭಾರತೀಯ ಚಿತ್ರರಂಗದಲ್ಲಿ ಅಸಾಧಾರಣ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಭಾರತ ಸರ್ಕಾರವು ನೀಡುವ ಅತ್ಯುನ್ನತ ಜೀವಮಾನದ ಗೌರವವಾಗಿದೆ. 1969 ರಲ್ಲಿ ಸ್ಥಾಪಿತವಾದ ಈ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಪಿತಾಮಹ ಎಂದು ಕರೆಯಲಾಗುವ ದಾದಾಸಾಹೇಬ್ ಫಾಲ್ಕೆ ಅವರ ಹೆಸರಿನಲ್ಲಿ ನೀಡಲಾಗುತ್ತದೆ. ಈ ಪ್ರಶಸ್ತಿಯು ವಾರ್ಷಿಕವಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಸಮಾರಂಭದಲ್ಲಿ ನೀಡಲ್ಪಡುತ್ತದೆ. ಈ ಬಾರಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಖ್ಯಾತ ನಟ ಮೋಹನ್ ಲಾಲ್ ಆಯ್ಕೆಯಾಗಿದ್ದಾರೆ.

ಭಾರತೀಯ ಚಿತ್ರರಂಗಕ್ಕೆ ಮೋಹನ್ ಲಾಲ್ ನೀಡಿರುವ ಅಪ್ರತಿಮ ಕೊಡುಗೆಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಾಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

ಸೆಪ್ಟೆಂಬರ್ 23ರಂದು ನಡೆಯಲಿರು 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮೋಹನ್ ಲಾಲ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದೆ.

Home add -Advt

Related Articles

Back to top button